ಸಿಂಧುತ್ವ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ ಆದೇಶ ವಾಪಸ್ ಪಡೆಯಿರಿ: ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

Karnataka Prantha raitha sanga protest mandya
Published on

ಮಂಡ್ಯ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ-2022ಯಲ್ಲಿ ಸಾಮಾನ್ಯ ಜ್ಯೇಷ್ಠತಾ ವರ್ಗದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಸಿಂಧುತ್ವ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಕಡ್ಡಾಯಗೊಳಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ನಗರದ ಡಿಡಿಪಿಐ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು.

ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿರುವ ಜನರಲ್ ಮೆರಿಟ್ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣಪತ್ರ ಕೇಳುತ್ತಿರುವುದು ಸಂವಿಧಾನ ವಿರೋಧಿ ಮತ್ತು ಕಾನೂನು ಬಾಹಿರ ಕ್ರಮವಾಗಿದೆ. ಇದು ಪ್ರತಿಭಾವಂತರ ಪ್ರತಿಭೆಗೆ ಕೊಡಲಿ ಪೆಟ್ಟು ನೀಡಿದಂತಾಗಿದೆ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಡಿಡಿಪಿಐ ಶಿವರಾಮೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಮುಖಂಡರಾದ ಎನ್.ಎಲ್.ಭರತ್‌ರಾಜು, ಎನ್.ಲಿಂಗರಾಜಮೂರ್ತಿ, ಸಿದ್ದೇಗೌಡ, ಮರಿಲಿಂಗೇಗೌಡ, ಎಲ್.ಶಿವಕುಮಾರ್, ಜಿ.ಸಿ.ಸತೀಶ್, ಮಹದೇವಯ್ಯ, ಕೆ.ಸಿ.ಸತೀಶ್, ಎಚ್.ಕೆ.ತಿಮ್ಮೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net