Karnataka Rain..ಬೆಂಗಳೂರಿನಲ್ಲಿ ಅ.20ರವರೆಗೆ ಭಾರಿ ಮಳೆ; ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ..

rain final
Published on

 ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ( Karnataka Rain ) ಅಬ್ಬರ ಹೆಚ್ಚಾಗಲಿದ್ದು, ಯೆಲ್ಲೋ , ಆರೆಂಜ್ ಅಲರ್ಟ್​ ಇರಲಿದೆ  ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ರಾತ್ರಿಯಿಂದಲೇ ಸಾಧಾರಣ ಮಳೆ ಆಗುತ್ತಿದೆ. ಇದೇ ಮಳೆ ನಾಳೆಯಿಂದ‌ ಭಾರೀ ಪ್ರಮಾಣದಲ್ಲಿ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಧಿಕಾರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

heavy rain

ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 15 ರಿಂದ 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ತಿಳಿಸಲಾಗಿದೆ.

Rains

ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಲು, ಕಮ್ಮರಡಿ, ಹುಣಸೂರಿನಲ್ಲಿ ಮಳೆಯಾಗಿದೆ. ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್​ಡಿಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಮಳೆಯಾಗಿದೆ.

Rain

ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಶಿವಮೊಗ್ಗ,  ಕೊಡಗು, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ಅಕ್ಟೋಬರ್ 17 ರಂದು ಭಾರೀ ಮಳೆಯಾಗಲಿದೆ. ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

Rain

ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net