ಸಂಸ್ಕೃತಿ ಬೆಳವಣಿಗೆಯಲ್ಲಿ ಯುವ ಜನರಿಗಿದೆ ಪಾತ್ರ : ನಾರಾಯಣ ರೈ ಕುಕ್ಕುವಳ್ಳಿ ಹೇಳಿಕೆ

Published on

ಸುಳ್ಯ: ಕನ್ನಡ ನಾಡು ನುಡಿ, ಸಂಸ್ಕೃತಿಯ ಬೆಳವಣಿಗೆಯಲ್ಲಿ ಯುವ ಜನರ ಪಾತ್ರ ಮಹತ್ವವಾಗಿದೆ. ಬರವಣಿಗೆಯಿಂದ ಜ್ಞಾನ ವೃದ್ಧಿ

ಸಾಧ್ಯ ಎಂದು ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು.

ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಆಶ್ರಯದಲ್ಲಿ ಆರ್.ಪಿ.ಕಲಾ ಸೇವಾ ಟ್ರಸ್ಟ್ ಪಾಂಬಾರು ಸಹಯೋಗದಲ್ಲಿ ಇತ್ತೀಚೆಗೆ ಕನ್ನಡ ರಾಜ್ಯೋತ್ಸವ ಸಂಭ್ರಮ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೀತ ಗಾಯನ, ನೃತ್ಯ ರೂಪಕ, ಸಾಹಿತ್ಯ ಕವಿಗೋಷ್ಠಿ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೆಳ್ಳಾರೆ ಗ್ರಾಪಂ ಅಧ್ಯಕ್ಷೆ ನಮಿತಾ ಎಲ್.ರೈ ಉದ್ಘಾಟಿಸಿದರು.

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಅಧ್ಯಕ್ಷತೆ ವಹಿಸಿದ್ದರು. ಬಂಗ್ಲೆಗುಡ್ಡೆ ಮಾರಿಯಮ್ಮ ದೇವಸ್ಥಾನದ ಧರ್ಮದರ್ಶಿ ಚಂದ್ರ ಕೆ, ಗ್ರಾಮ ಸಾಹಿತ್ಯ ಸಂಭ್ರಮ ಸಂಚಾಲಕ ನಾರಾಯಣ ಕುಂಬ್ರ, ಸಾಹಿತಿ, ರಂಗಭೂಮಿ ಕಲಾವಿದ ಧೀರಜ್ ಬೆಳ್ಳಾರೆ, ಯುವ ಸಾಹಿತಿ ಮುಸ್ತಾಫ ಬೆಳ್ಳಾರೆ ಉಪಸ್ಥಿತರಿದ್ದರು. ಆರ್.ಪಿ.ಕಲಾ ಸೇವಾ ಟ್ರಸ್ಟ್‌ನ ಅಕ್ಷತಾ ನಾಗನಕಜೆ ಸ್ವಾಗತಿಸಿದರು.

ಸಂಚಾಲಕ ರವಿ ಪಾಂಬಾರು ವಂದಿಸಿದರು. ಉಪನ್ಯಾಸಕ ಯೋಗೀಶ್ ತಳೂರು ಕಾರ್ಯಕ್ರಮ ನಿರ್ವಹಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಆರ್.ಪಿ.ಕಲಾ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀಧರ್ ಎಕ್ಕಡ್ಕ ವಹಿಸಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಗೋಕುಲ್‌ದಾಸ್, ಉದ್ಯಮಿ ಎಂ.ಮಾಧವ ಗೌಡ, ಪೊಲೀಸ್ ಸಹಾಯಕ ಉಪನಿರೀಕ್ಷಕ ಸುಬ್ರಾಯ ಕಲ್ಪಣೆ, ಸಾಹಿತಿ, ಚಲನಚಿತ್ರ ಸಹ ನಿರ್ದೇಶಕ ಪದ್ಮರಾಜ್ ಚಾರ್ವಾಕ ಉಪಸ್ಥಿತರಿದ್ದರು. ರೋಹಿತ್ ಕುರಿಕ್ಕಾರ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net