

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ವತಿಯಿಂದ ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನ. 1ರಂದು ಬೆಳಗ್ಗೆ 9 ಗಂಟೆಗೆ 69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧ್ವಜಾರೋಹಣ ನೆರವೇರಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ಅಬ್ಬಯ್ಯ ಪ್ರಸಾದ, ಎನ್.ಎಚ್ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಎಸ್.ವಿ.ಸಂಕನೂರ, ಪ್ರದಿಪ ಶೆಟ್ಟರ್, ಮೇಯರ್ ರಾಮಪ್ಪ ಬಡಿಗೇರ, ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾಧಿಕಾರಿ, ಇತರ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಆಲೂರು ವೆಂಕಟರಾವ್ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.