ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

KSA
Published on

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪುಸ್ತಕ ಬಹುಮಾನಕ್ಕೆ 2023ರಲ್ಲಿ ಪ್ರಕಟವಾದ ವಿವಿಧ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಿದೆ.

ಕಾವ್ಯ (ವಚನಗಳು ಮತ್ತು ಹನಿಗವನಗಳು), ಕಾದಂಬರಿ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ ವಿಷಯಗಳು, ಸಂಶೋಧನೆ, ಅನುವಾದ, ಸಂಕೀರ್ಣ ಸೇರಿ 23 ವಿಭಾಗಗಳಲ್ಲಿ ಕೃತಿಗಳನ್ನು ಆಹ್ವಾನಿಸಿದ್ದು, ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡಿದ ಒಂದು ಕೃತಿಗೆ ಪ್ರಶಸ್ತಿ ನೀಡಲಾಗುತ್ತದೆ.

ಕೃತಿಗಳು 2023ರ ಜ.1 ರಿಂದ ಡಿ.31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಜನಪದ ಪ್ರಕಾರ ಹಾಗೂ ಪಿಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ. ಕೃತಿಯ ನಾಲ್ಕು ಪ್ರತಿಗಳನ್ನು ಆ.31ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು- 2 ವಿಳಾಸಕ್ಕೆ ಕಳುಹಿಸಬೇಕು. ವೆಬ್‌ಸೈಟ್:sahithyaacademy.karnataka.gov.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net