

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣ ಕಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಆಸಕ್ತ ಲೇಖಕರು, ಸಂಪಾದಕರು ಮತ್ತು ಪ್ರಕಾಶಕರು ನಾಲ್ಕು ಕೃತಿಗಳ ತಲಾ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಇವರಿಗೆ ರಿಜಿಸ್ಟರ್ಡ್ ಅಂಚೆ / ಕೊರಿಯರ್ ಅಥವಾ ಅಂಚೆ ಮೂಲಕ ಆಗಸ್ಟ್ 31 ರೊಳಗೆ ಕಳುಹಿಸುವಂತೆ ಅಕಾಡೆಮಿ ರಿಜಿಸ್ಟ್ರಾರ್ ಪ್ರಕರಣೆಯಲ್ಲಿ ತಿಳಿಸಿದ್ದಾರೆ.
ವಿವರಗಳಿಗೆ ಇ ಮೇಲ್:www.sahithyaacademy.karnataka.gov.in ಸಂಪರ್ಕಿಸಬಹುದು.