ಕರ್ನಾಟಕ ಸಂಭ್ರಮ 50ಕ್ಕೆ ಲಾಂಛನ ಮಾದರಿ ಆಹ್ವಾನ

K and C
Published on

ಬೆಂಗಳೂರು: ‘ಕರ್ನಾಟಕ ಸಂಭ್ರಮ 50-ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ’ ವರ್ಷವಿಡೀ ನಡೆಸುವ ವೈವಿಧ್ಯಮಯ ಕನ್ನಡ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಬಿಂಬಿಸುವ ಲಾಂಛನದ ಮಾದರಿಗಳನ್ನು ಆಹ್ವಾನಿಸಲಾಗಿದೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ‘ಕರ್ನಾಟಕ ಸಂಭ್ರಮ 50’ -‘ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯ ಹಾಗೂ ಅರ್ಥಪೂರ್ಣವಾಗಿ ಕಾರ್ಯಕ್ರಮಗಳನ್ನು ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉದ್ದೇಶಿಸಿದೆ.

ಕಾರ್ಯಕ್ರಮದ ಸಂಭ್ರಮ ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕೃತಿ ಬಿಂಬಿಸುವ ವಿಶಿಷ್ಟವಾದ ಲಾಂಛನ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಆಸಕ್ತರಿಂದ ಲಾಂಛನದ ಮಾದರಿಗಳನ್ನು ಆಹ್ವಾನಿಸಿದೆ. ಆಯ್ಕೆಯಾಗುವ ಲಾಂಛನಕ್ಕೆ 25 ಸಾವಿರ ರೂ.ಗಳ ಬಹುಮಾನ ನಿಗದಿಪಡಿಸಲಾಗಿದೆ. ಲಾಂಛನದ ಮಾದರಿಯನ್ನು ಸೆ. 30ರವರೆಗೆ ಕಳುಹಿಸಬೇಕಿದೆ. ಮಾಹಿತಿಗಾಗಿ ಇಲಾಖೆಯ ಜಾಲತಾಣ https://www.kannadasinikamataka.gov.in  ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net