ಪ್ರೊ.ಶೇಖ್ ಅಲಿಗೆ ಮರಣೋತ್ತರ ಪ್ರಶಸ್ತಿ: ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್ ಮಾಹಿತಿ

Karnataka Sanga press conference Mandya
Published on

ಮಂಡ್ಯ: ಜಾನಪದ ವಿದ್ವಾಂಸ ಹ.ಕ.ರಾಜೇಗೌಡ ಹೆಸರಿನಲ್ಲಿ ಕರ್ನಾಟಕ ಸಂಘದಿಂದ ಕೊಡಮಾಡುತ್ತಿರುವ ಪ್ರಥಮ ವರ್ಷದ ಮರಣೋತ್ತರ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾಲಯದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಶೇಖ್ ಅಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್ ಚಂದಗಾಲು ತಿಳಿಸಿದರು.

ಆ.18ರಂದು ಸಂಜೆ 4ಗಂಟೆಗೆ ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಿರುವ ಸಮಾರಂಭದ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಕೊಮ್ಮೇರಹಳ್ಳಿ ಶಾಖಾ ಮಠದ ಮುಖ್ಯಸ್ಥ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಲೇಖಕ ಡಾ.ಡಿ.ಕೆ.ರಾಜೇಂದ್ರ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಜಲಸಾರಿಗೆ ನಿಗಮದ ಮುಖ್ಯಕಾರ್ಯನಿರ್ವಾಹಾಧಿಕಾರಿ ಜಯರಾಂ ರಾಯಪುರ ಅವರು ಪ್ರಶಸ್ತಿ ಪ್ರದಾನ ಮಾಡಿ ಗಂಗ ಸಾಮ್ರಾಜ್ಯದ ಬಗ್ಗೆ ಉಪನ್ಯಾಸ ನೀಡುವರು. ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಶೇಖ್ ಅಲಿ ಅವರ ಪುತ್ರ ಡಾ.ಝಾಕೀರ್ ಹುಸೇನ್ ಅವರು ಪ್ರಶಸ್ತಿ ಸ್ವೀಕರಿಸುವರು. ಪ್ರಶಸ್ತಿ 25 ಸಾವಿರ ರೂ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಜಾನಪದ ವಿದ್ವಾಂಸ ಹ.ಕ.ರಾಜೇಗೌಡ ಅವರ ಪುತ್ರ ಎಚ್.ಆರ್.ದಿನೇಶ್‌ಚಂದ್ರ ಭಾಗವಹಿಸುವರು ಎಂದು ವಿವರಿಸಿದರು.

ಕರ್ನಾಟಕ ಸಂಘದ ಕಾರ್ಯದರ್ಶಿ ಎಚ್.ಡಿ.ಸೋಮಶೇಖರ್, ನಿರ್ದೇಶಕ ಹನಕೆರೆ ನಾಗಪ್ಪ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net