

ಮಂಡ್ಯ: ಹವ್ಯಾಸಿ ಹಿರಿಯ ರಂಗನಟ ಸಿ.ಎಸ್.ರಾಮಕೃಷ್ಣ ಅವರ ನೆನಪಿನಲ್ಲಿ ಕರ್ನಾಟಕ ಸಂಘದ ವತಿಯಿಂದ ಫೆ.9ರಂದು ಸಂಜೆ 6.30ಕ್ಕೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಸಾಹೇಬರ ಸರ್ಕೀಟು’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಎಸ್.ಬಿ.ಶಂಕರೇಗೌಡ ತಿಳಿಸಿದರು.
ಸಾಹೇಬರ ಸರ್ಕೀಟು ಎಂ.ಆರ್.ಶ್ರೀನಿವಾಸಮೂರ್ತಿ ಅವರ ರಂಗಣ್ಣನ ಕನಸಿನ ದಿನಗಳು ಕಾದಂಬರಿ ಆಧಾರಿತ ನಾಟಕ. ಮೈಸೂರು ಜಂಟಿ ನಿರ್ದೇಶಕ ವಿ.ಎಸ್.ಮಲ್ಲಿಕಾರ್ಜುನಸ್ವಾಮಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಮಿತ್ರ ಫೌಂಡೇಷನ್‌ನ ವಿಜಯ ರಾಮೇಗೌಡ ಅಧ್ಯಕ್ಷತೆ ವಹಿಸುವರು. ಮೀಲ್‌ಕಾರ್ಡ್‌ನ ಪ್ರಸನ್ನ ಸಂಚಿಕೆ ಬಿಡುಗಡೆ ಮಾಡುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮುಖ್ಯ ಅತಿಥಿಗಳಾಗಿ ಮೈಷುಗರ್ ಮಾಜಿ ಅಧ್ಯಕ್ಷ ಬಿ.ಸಿ.ಶಿವಾನಂದ, ಅಲಯನ್ಸ್ ಕ್ಲಬ್‌ನ ಜಿಲ್ಲಾ ಪ್ರಾಂತಪಾಲ ಕೆ.ಟಿ.ಹನುಮಂತು, ತಾರಾ ಡಯಾಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಕೆ.ಚಂದ್ರಶೇಖರ್ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.
ಸಂಘದ ಕಾರ್ಯದರ್ಶಿ ಎಚ್.ಡಿ.ಸೋಮಶೇಖರ್, ನಿರ್ದೇಶಕ ನಾಗಪ್ಪ, ಬಾಲಕೃಷ್ಣ, ಉದಯ್‌ಶಂಕರ್ ಇದ್ದರು.