ಮಾ.25ರಂದು ನಗರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ: ನಿವೃತ್ತ ಪ್ರಾಂಶುಪಾಲ ಶಂಕರೇಗೌಡ ಮಾಹಿತಿ

Karnataka Sangha press conference Mandya
Published on

ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಜಿ.ಎಸ್.ಬೊಮ್ಮೇಗೌಡ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮಾ.25ರಂದು ಸಂಜೆ 5.30ಕ್ಕೆ ನಗರದ ಸಂಘದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ.ಎಸ್.ಬಿ.ಶಂಕರೇಗೌಡ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಹಿಸಲಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಿ.ಮಾದೇಗೌಡ ಅವರಿಗೆ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಶಸ್ತಿ ಪ್ರದಾನ ಮಾಡುವರು. ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅಭಿನಂದನಾ ನುಡಿಗಳನ್ನಾಡಲಿದ್ದು, ದತ್ತಿದಾನಿ ಜಿ.ಬಿ.ಶಿವಕುಮಾರ್ ಉಪಸ್ಥಿತರಿರಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದತ್ತಿದಾನಿ ಜಿ.ಬಿ.ಶಿವಕುಮಾರ್, ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ, ಸುರೇಶ್, ರಾಜಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net