ಲಾಂಛನದಲ್ಲಿ ಕನ್ನಡ ಪದಗಳ ಬಳಕೆಗೆ ಸೂಚನೆ

Cricket
Published on

ಬೆಂಗಳೂರು: ಲಾಂಛನದಲ್ಲಿ ಕನ್ನಡ ಪದಗಳನ್ನು ಬಳಸುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆದಿದೆ.

ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಕನ್ನಡ ಕಡೆಗಣಿಸಲಾಗುತ್ತಿದೆ ಎಂಬ ಕಾರಣಕ್ಕೆ ಪ್ರಾಧಿಕಾರವು ಕ್ರಿಕೆಟ್ ಸಂಸ್ಥೆಗೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿತ್ತು. ಈ ಬಗ್ಗೆ ಸಂಸ್ಥೆಯು ಸ್ಪಷ್ಟೀಕರಣ ನೀಡಿದ್ದು, ಮಹಾರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸಮಾರಂಭದಲ್ಲಿ ಅಚಾತುರ್ಯದಿಂದ ಕನ್ನಡ ಲಕ ಇರಲಿಲ್ಲ. ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿಲ್ಲ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದೆ.

ಇದಕ್ಕೆ ಪ್ರತಿಯಾಗಿ ಪತ್ರ ಬರೆದಿರುವ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ, ತಮ್ಮ ಸಂಸ್ಥೆಯ ಲಾಂಛನ ಸಂಪೂರ್ಣ ಆಂಗ್ಲಮಯವಾಗಿದೆ. ಕನ್ನಡ ಬೆಳೆಸುವ ನಿಟ್ಟಿನಲ್ಲಿ ಆದಷ್ಟು ಬೇಗ ಲಾಂಛನದಲ್ಲಿ ಕನ್ನಡ ಪದಗಳನ್ನು ಬಳಸಬೇಕು ಎಂದು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net