ಸಾದಿಕ್ ನಗರದ ಹಲ್ಲೆಕೋರರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ

karnataka-state-commission-for-women 1 APR 20
Published on

ಬೆಂಗಳೂರು: ಸಾದಿಕ್​ನಗರದಲ್ಲಿ ಕರೊನಾ ತಪಾಸಣೆಗೆಂದು ತೆರಳಿದ್ದ ನರ್ಸಗಳು, ಆಶಾ ಕಾರ್ಯಕರ್ತೆಯರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿರುವ ಪ್ರದೇಶದ ಜನರ ಆರೋಗ್ಯ ತಪಾಸಣೆ ನಡೆಸಿ ಮಾಹಿತಿ ಕಲೆಹಾಕುವಂತೆ ಸರ್ಕಾರ ಸೂಚಿಸಿದೆ. ಆದರೆ, ಸರ್ವೆ ನಡೆಸಲು ನರ್ಸ್​ಗಳೊಂದಿಗೆ ತೆರಳಿದ್ದ ಆಶಾ ಕಾರ್ಯರ್ತೆಯರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ.

ಹಲ್ಲೆ ಪ್ರಕರಣದ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದ್ದು, ಹಲ್ಲೆಗೊಳಗಾದವರಿಗೆ ಅಗತ್ಯ ಕಾನೂನು ಸಲಹೆ ಹಾಗೂ ಸೇವೆ ಒದಗಿಸಲಾಗುವುದು ಎಂದು ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಸಿಸಿ ಕ್ಯಾಮರಾ ದೃಶ್ಯಾವಳಿ ಒದಗಿಸಲು ಪೊಲೀಸರಿಗೆ ಮನವಿ ಮಾಡಲಾಗಿದೆ. ಮಹಿಳಾ ಆಯೋಗವೂ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net