

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆ ಉದ್ಯೋಗಿಗಳ ಮೇ ತಿಂಗಳ ವೇತನವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಸಿಬ್ಬಂದಿ ಮೇ ತಿಂಗಳ ವೇತನ ಪಾವತಿಗೆ ಅಗತ್ಯವಿದ್ದ 325.01 ಕೋಟಿ ರೂ. ಅನ್ನು ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ವೇತನ ಪಾವತಿ ಸಾಧ್ಯವಾಗಿದೆ.
ಕರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೊಳಿಸಿದ್ದ ಲಾಕ್‌ಡೌನ್‌ನಿಂದ ಸಾರಿಗೆ ಸಂಸ್ಥೆ ತೀವ್ರ ನಷ್ಟ ಅನುಭವಿಸಿತ್ತು. ಇದರಿಂದ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗಿರಲಿಲ್ಲ.
ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ವೇತನ ಪಾವತಿ ಮಾಡಲು ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೋರಿದ್ದರು. ಸಾರಿಗೆ ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಹಣ ಬಿಡುಗಡೆ ಮಾಡಿದ್ದಾರೆ.