

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕರ್ನಾಟಕ ವಿಶ್ವವಿದ್ಯಾಲಯವು ಕೊಡಮಾಡುವ 2024ನೇ ಸಾಲಿನ `ಅರಿವೇ ಗುರು' ಪ್ರಶಸ್ತಿ ಸಮಾರಂಭವನ್ನು ಜ. 29ರಂದು ಬೆಳಗ್ಗೆ 11 ಗಂಟೆಗೆ ಸುವರ್ಣ ಮಹೋತ್ಸವ ಭವನದಲ್ಲಿ ಆಯೋಜಿಸಲಾಗಿದೆ. ಕಲಾ ಕ್ಷೇತ್ರದಿಂದ ಡಾ. ಚಂದ್ರಶೇಖರ ಕಂಬಾರ, ಸಮಾಜ ವಿಜ್ಞಾನ ಕ್ಷೇತ್ರದಿಂದ ಡಾ. ವಿ.ಜಿ. ತಳವಾರ ಹಾಗೂ ವಿಜ್ಞಾನ ಕ್ಷೇತ್ರದಿಂದ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಗಣಿತ ವಿಜ್ಞಾನಿ ಪ್ರೊ. ಎನ್.ಎಂ. ಬುಜುರ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.
ಹಂಪಿ ಕನ್ನಡ ವಿಶ್ವವಿದ್ಯಾಯದ ಕುಲಪತಿ ಡಾ. ಡಿ.ಬಿ. ಪರಮಶಿವಮೂರ್ತಿ ಪ್ರಶಸ್ತಿ ಪ್ರದಾನ ಮಾಡುವರು. ಕವಿವಿ ಪ್ರಭಾರ ಕುಲಪತಿ ಪ್ರೊ. ಎಸ್. ಜಯಶ್ರೀ ಅಧ್ಯಕ್ಷತೆ ವಹಿಸುವರು. ಕುಲಸಚಿವ ಡಾ. ಎ. ಚೆನ್ನಪ್ಪ, ಪ್ರಸಾರಾಂಗ ನಿರ್ದೇಶಕ ಪ್ರೊ. ಕೃಷ್ಣ ನಾಯಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.