ಕರ್ನಾಟಕ ವಿಶ್ವವಿದ್ಯಾಲಯ ಬಂದ್ ಮಾಡಿ ಪ್ರತಿಭಟನೆ

web 3
Published on

ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಆಗ್ರಹಿಸಿ ಬೋಧಕ- ಬೋಧಕೇತರ ಸಿಬ್ಬಂದಿ ಬುಧವಾರ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ಆಡಳಿತ ಕಚೇರಿ ಎದುರು ಜಮಾಯಿಸಿದ ಸಿಬ್ಬಂದಿ, ವಿಶ್ವವಿದ್ಯಾಲಯ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸಮರ್ಪಕ ಅನುದಾನ ಬಿಡುಗಡೆ ಮಾಡಬೇಕು. ಪ್ರತಿಭಟನೆಗೆ ವಿದ್ಯಾರ್ಥಿಗಳೂ ಸಾಥ್ ನೀಡಿ ಸರ್ಕಾರ ಹಾಗೂ ಕವಿವಿ ಕುಲಪತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಶ್ವವಿದ್ಯಾಲಯದ ಆರ್ಥಿಕ ಸಂಕಷ್ಟ ನಿವಾರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಿಕ್ಷಕರು- ಶಿಕ್ಷಕೇತರ ನೌಕರರು, ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ ಕಲ್ಪಿಸಲು ಆಂತರಿಕ ಸಂಪನ್ಮೂಲ ಬಳಸಿಕೊಳ್ಳಬೇಕು ಎನ್ನುತ್ತಿರುವುದು ಸರಿಯಲ್ಲ. ಸರ್ಕಾರ ಕೋಟಿ ಕೋಟಿ ಅನುದಾನ ಬಾಕಿ ಉಳಿಸಿಕೊಂಡಿದ್ದರಿ0ದ ವಿಶ್ವವಿದ್ಯಾಲಯದ ಪಿಂಚಣಿ, ವೇತನ ಬಾಕಿ, ತಾತ್ಕಾಲಿಕ ಶಿಕ್ಷಕರ ನೇಮಕ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ವಿದ್ಯಾರ್ಥಿ ವೇತನ ನೀಡಲು ಸಮಸ್ಯೆಯಾಗಿದೆ. ಅಗತ್ಯ ಅನುದಾನ ಬಿಡುಗಡೆ ಮಾಡದಿದ್ದರೆ ಅನಿರ್ದಿಷ್ಟಾವಽ ಬಂದ್‌ಗೆ ಕರೆ ನೀಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಕವಿವಿ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ರಾಮಾಜನೇಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಸುಭಾಷ ನಾಟೀಕಾರ, ಡಾ. ಷಣ್ಮುಖ ಹಾಗೂ ವಿವಿಯ ವಿವಿಧ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net