

ಬೆಂಗಳೂರು: ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯು ವಿಜಯನಗರದಲ್ಲಿ ನಡೆಸುತ್ತಿರುವ ಜಗಜ್ಯೋತಿ ಶ್ರೀ ಬಸವೇಶ್ವರ ಉಚಿತ ವಿದ್ಯಾರ್ಥಿ ನಿಲಯಕ್ಕೆ 2025-26ನೇ ಸಾಲಿನ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದು ಬೆಂಗಳೂರಿನ ವಿವಿಧ ಕಾಲೇಜುಗಳಲ್ಲಿ ಡಿಪ್ಲೊಮಾ ಮತ್ತು ಪದವಿ ತರಗತಿಗಳಿಗೆ ಪ್ರವೇಶ ಪಡೆದಿರುವ ಬಡ ಹಾಗೂ ಪ್ರತಿಭಾವಂತ ವೀರಶೈವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಉಳಿತ ಕೋರ್ಸ್ಗಳಿಗೆ ನಂತರ ಅರ್ಜಿ ಆಹ್ವಾನಿಸಲಾಗುವುದು. ಅರ್ಜಿಯನ್ನು ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ, ನಂ.18/1, ಕಲ್ಯಾಣ ಸಮುಚ್ಛಯ, 2ನೇ ಮಹಡಿ, 6ನೇ ಅಡ್ಡರಸ್ತೆ, ಗಾಂಧಿನಗರ, ಬೆಂಗಳೂರು ಇಲ್ಲಿ ಮೇ 31ರೊಳಗೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜೂ.5ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ:080-22266416 ಸಂಪರ್ಕಿಸಬಹುದು.
ಸಂಸ್ಥೆಯು ನಡೆಸುತ್ತಿರುವ ನಾಗರಭಾವಿಯ ಎಂ.ಬಸವಯ್ಯ ಪದವಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಸ ನೀಡಲಾಗುವುದು.