ಸೈನಿಕ ಶಾಲೆಗೆ ಒಕ್ಕರಿಸಿದ ಕರೊನಾ; 8 ವಿದ್ಯಾರ್ಥಿಗಳಿಗೆ ಸೋಂಕು ದೃಢ

IMG-20210318-WA0108
Published on

ವಿಜಯಪುರ: ಕರೊನಾ 2ನೇ ಅಲೆ ಜಿಲ್ಲೆಯಲ್ಲಿ ಭಾರೀ ಸದ್ದು ಮಾಡುತ್ತಿದ್ದು ಪ್ರತಿಷ್ಟಿತ ಸೈನಿಕ ಶಾಲೆಗೂ ಮಹಾಮಾರಿ ಒಕ್ಕರಿಸಿಕೊಂಡಿದೆ.

ಶಾಲೆಯ 140 ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿ ಸಂಗ್ರಹಿಸಿ ಅದರಲ್ಲಿ 135 ಮಾದರಿಗಳನ್ನು ಪರೀಕ್ಷಿಸಲಾಗಿ 8 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ ಪಟ್ಟಿದೆ. ಈ ಪ್ರಕರಣಗಳ ಪೈಕಿ ಮಾ. 17ರಂದು ಒಂದೇ ದಿನದಲ್ಲಿ 5 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಇಬ್ಬರನ್ನು ಮನೆಯ ಹೋಮ್‌ಕ್ವಾರಂಟೈನ್‌ನಲ್ಲಿರಿಸಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಸೈನಿಕ ಶಾಲೆಯ ವ್ಯಾಪ್ತಿಯಲ್ಲಿನ ಐಸೋಲೇಶನ್ ಕೊಠಡಿಯಲ್ಲಿ ಇರಿಸಲಾಗಿದೆ.

ಕೊರನಾ ತಡೆಗೆ ಜಿಲ್ಲಾಡಳಿತ ವ್ಯಾಪಕ ಕ್ರಮ ಕೈಗೊಳ್ಳಲಾಗುತ್ತಿದ್ದು ಮಾಸ್ಕ್ ಮತ್ತು ಸಾಮಾಜಿಕ ಅಂತರದಂಥ ನಿಯಮಗಳನ್ನು ಕಡ್ಡಾಯಗೊಳಿಸಿದ್ದಾರೆ. ಗಡಿಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net