ಯುವ ಜನತೆಗೆ ರಾಜೀವ್‌ಗಾಂಧಿ ಆದರ್ಶ

Karatagi rajivgandi birthday
ಕಾರಟಗಿ ಪಟ್ಟಣಕ್ಕೆ ಆಗಮಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸದ್ಭಾವನಾ ಜ್ಯೋತಿ ಯಾತ್ರೆಯನ್ನು ಸೋಮವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಬರಮಾಡಿಕೊಂಡರು. ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಶಿವರೆಡ್ಡಿ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಎಂ.ಪಿ ಇದ್ದರು.
Published on

ಕಾರಟಗಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನ ನಿಮಿತ್ತ ರಾಜೀವ್ ಗಾಂಧಿ ಸದ್ಭಾವನಾ ಜ್ಯೋತಿ ಯಾತ್ರೆಯನ್ನು ಪಟ್ಟಣದಲ್ಲಿ ಸೋಮವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಬರಮಾಡಿಕೊಂಡರು.

ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಶಿವರೆಡ್ಡಿ ನಾಯಕ ಮಾತನಾಡಿ, ಆಧುನಿಕ ಚಿಂತನೆ ಧ್ಯೇಯದಲ್ಲಿ ದೇಶವನ್ನು ಮುನ್ನಡೆಸಿದ್ದ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಭಾರತಕ್ಕೆ ಜಾಗತಿಕ ಮನ್ನಣೆ ದೊರಕಿಸಿ ಕೊಟ್ಟಿದ್ದರು. ಮಾಹಿತಿ-ತಂತ್ರಜ್ಞಾನದಿಂದ ಕ್ರಾಂತಿ ಮಾಡಿದ್ದ ಅವರು, ಭಾರತವನ್ನು ಶಕ್ತಿಯುತ ರಾಷ್ಟ್ರವನ್ನಾಗಿಸಲು ಶ್ರಮಿಸಿದ್ದರು. ದೇಶದ ಐಕ್ಯತೆ, ಸಮಗ್ರತೆಗಾಗಿ ಹುತಾತ್ಮರಾಗಿ ಆದರ್ಶವಾಗಿದ್ದಾರೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿಪಾಟೀಲ್ ಮಾತನಾಡಿ, ಭಯೋತ್ಪಾದನೆ ಅಶಾಂತಿಯ ಸಂಕೇತ. ಕೋಮುಭಾವನೆಗಳ ವಿರುದ್ಧದ ಯಾತ್ರೆಯುದ್ದಕ್ಕೂ ಸಾಮರಸ್ಯ-ಸೌಹಾರ್ದತೆಯ ಅರಿವು ಮೂಡಿಸಲಾಗುತ್ತಿದೆ. ಸ್ಥಿರತೆಯ ರಾಷ್ಟ್ರ ನಿರ್ಮಾಣಕ್ಕೆ ಸದ್ಭಾವನಾ ಯಾತ್ರೆ ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಅರಳಿ ನಾಗರಾಜ್, ಸದಸ್ಯ ಸೋಮನಾಥ ದೊಡ್ಡಮನೆ, ತಾಲೂಕು ಸಮಿತಿ ಅಧ್ಯಕ್ಷ ದೇವಪ್ಪ ಭಾವಿಕಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲಿಂಗೇಶ್ ಕಲ್ಗುಡಿ, ಪ್ರಮುಖರಾದ ಚನ್ನಬಸಪ್ಪ ಸುಂಕದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net