ಕರುಮಾಚೇರಿ ಮಾರುಕಟ್ಟೆ ಕೇಂದ್ರ ಉದ್ಘಾಟನೆ

27
Published on

ಕಾಸರಗೋಡು: ನೀಲೇಶ್ವರಂ ಬ್ಲಾಕ್ ಪಂಚಾಯಿತಿ ಪ್ರಾರಂಭಿಸಿ ಜಾರಿಗೆ ತಂದಿರುವ ವಿವಿಧ ಚಟುವಟಿಕೆಗಳು ಗಮನಾರ್ಹ ಮತ್ತು ಶ್ಲಾನೀಯ ಎಂದು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಸಚಿವ ಎ.ಕೆ.ಶಶೀಂದ್ರನ್ ಹೇಳಿದರು.

ನೀಲೇಶ್ವರ ಬ್ಲಾಕ್ ಪಂಚಾಯಿತಿ ಕರುಮಾಚೇರಿ ಮಹಿಳಾ ಮಾರುಕಟ್ಟೆ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ನೀಲೇಶ್ವರಂ ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಮಾಧವನ್ ಮಣಿಯರ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಇಂಜಿನಿಯರ್ ಸುನೀಲ್ ಕುಮಾರ್ ವರದಿ ಮಂಡಿಸಿದರು. ನೀಲೇಶ್ವರ ನಗರಸಭೆ ಅಧ್ಯಕ್ಷೆ ಟಿ.ವಿ.ಶಾಂತಾ, ಉಪಾಧ್ಯಕ್ಷ ಮಹಮ್ಮದ್ ರಫಿ, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಸುಮೇಶ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಅನಿಲ್ ಕುಮಾರ್, ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ವಿ.ಸುನೀತಾ, ನೀಲೇಶ್ವರಂ ಬ್ಲಾಕ್ ಪಂಚಾಯಿತಿ ಸದಸ್ಯ ಟಿ.ಎಸ್.ನಜೀಬ್, ನೀಲೇಶ್ವರ ನಗರಸಭಾ ಕೌನ್ಸಿಲರ್ ಕೆ.ಮೋಹನನ್, ಬ್ಲಾಕ್ ಪಂಚಾಯಿತಿ ಕಾರ್ಯದರ್ಶಿ ಟಿ.ರಾಕೇಶ್ ಮೊದಲಾದವರಿದ್ದರು.

ನೀಲೇಶ್ವರಂ ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷೆ ಪಿ.ಕೆ.ಲಕ್ಷ್ಮೀ ಸ್ವಾಗತಿಸಿದರು. ವಿಸ್ತರಣಾಧಿಕಾರಿ ಮಿನಿಜಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net