

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 1ರಂದು ಸಂಜೆ 4.30ಕ್ಕೆ ನಂಜನಗೂಡು ತಾಲೂಕಿನ ದೇಬೂರು ಗ್ರಾಮದಲ್ಲಿ ಕರುನಾಡ ಕೃಷಿ ತಿಲಕ ಪ್ರಶಸ್ತಿ ಪ್ರದಾನ, ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಹೇಮಂತ್‌ಕುಮಾರ್‌ಗೌಡ ಹೇಳಿದರು.
ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘ ಮತ್ತು ದೇಬೂರು ಜೈ ಭುವನೇಶ್ವರಿ ಗೆಳೆಯರ ಬಳಗದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಂಜನಗೂಡು ಸರ್ಕಲ್ ಇನ್ಸ್‌ಪೆಕ್ಟರ್ ಶಿವನಂಜಶೆಟ್ಟಿ ಉದ್ಘಾಟಿಸಲಿದ್ದಾರೆ. ತಹಸೀಲ್ದಾರ್ ಶಿವಮೂರ್ತಿ, ಸಹಾಯಕ ಕೃಷಿ ನಿರ್ದೇಶಕ ಬಿ.ಎಸ್.ದೀಪಕ್, ದೇಬೂರು ಗ್ರಾಪಂ ಪಿಡಿಒ ಸೋಮಶೇಖರ್ ಭಾಗವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಅಧ್ಯಕ್ಷ ಚಂದನ್‌ಗೌಡ ಅವರಿಗೆ ಕರುನಾಡ ಕೃಷಿ ತಿಲಕ ಪ್ರಶಸ್ತಿ ಪ್ರದಾನ ಮಾಡಿ, ಸಂಘದ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ಮಾಡಲಾಗುತ್ತದೆ ಎಂದರು.
ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವಾಮೀಗೌಡ, ರಾಜ್ಯ ಯುವ ಘಟಕದ ಅಧ್ಯಕ್ಷ ಅಭಿಷೇಕ್, ಸಂಘಟನಾ ಕಾರ್ಯದರ್ಶಿ ಮೂರ್ತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋವರ್ಧನ್, ಶಿವಕುಮಾರ್ ಇದ್ದರು.