ಬಾನಿಯಲ್ಲಿ ನೀರು ತುಂಬಿಕೊಳ್ಳಲು ಹೋದ ವ್ಯಕ್ತಿ ನೀರಿನಲ್ಲಿ ಮುಳಗಿ ಸಾವು

Crime Logo
Published on

ರಾಣೆಬೆನ್ನೂರ: ಬಾನಿಯಲ್ಲಿ ನೀರು ತುಂಬಿಕೊಳ್ಳಲು ಹೋದ ವ್ಯಕ್ತಿಯೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕರೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಹನುಮಂತಪ್ಪ ನೀಲಪ್ಪ ಚಿಕ್ಕಪ್ಪನವರ (59) ಮೃತ ವ್ಯಕ್ತಿ.
ಈತ ಗ್ರಾಮದ ಬಳಿ ಬಹಿರ್ದೆಸೆಗೆ ಹೋದಾಗ ನೀರು ತುಂಬಿಕೊಳ್ಳುವ ಸಲುವಾಗಿ ಬಾನಿ ಬಳಿ ಹೋಗಿದ್ದಾನೆ. ಈ ಸಮಯದಲ್ಲಿ ಕಾಲು ಜಾರಿ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net