ಕಾರವಾರ- ಬೆಂಗಳೂರು ರೈಲು ಇನ್ನು ಪಂಚಗಂಗಾ ಎಕ್ಸ್‌ಪ್ರೆಸ್

train
Published on

ಕುಂದಾಪುರ: ಕಾರವಾರ- ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್‌ಫಾಸ್ಟ್ ರೈಲಿಗೆ (ನಂ.16595/16596) ಉಡುಪಿ ಜಿಲ್ಲೆಯ ಐದು ಪ್ರಮುಖ ಪುಣ್ಯನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ ಪಂಚಗಂಗಾವಳಿ ನದಿಯನ್ನು ಪ್ರತಿನಿಧಿಸಿ ‘ಪಂಚಗಂಗಾ ಎಕ್ಸ್‌ಪ್ರೆಸ್’ ಎಂಬ ಹೆಸರನ್ನು ಕೇಂದ್ರ ರೈಲ್ವೆ ಸಚಿವಾಲಯ ನಾಮಕರಣ ಮಾಡಿ ಆದೇಶಿಸಿದೆ.
ಕರಾವಳಿಯ ಬಹುಮುಖ್ಯ ಪುಣ್ಯ ಕ್ಷೇತ್ರಗಳ ಮೂಲಕ ಹರಿಯುವ ಪಂಚಗಂಗಾ, ಜಿಲ್ಲೆಯ ತೀರ್ಥ ಕ್ಷೇತ್ರ, ಪ್ರವಾಸೋದ್ಯಮ, ಮೀನುಗಾರಿಕೆ, ಕೃಷಿ ಹಾಗೂ ಜನಜೀವನಕ್ಕೆ ಆಧಾರವಾಗಿದೆ. ಜನರ ಅಪೇಕ್ಷೆಯಂತೆ ಪಂಚಗಂಗಾ ಹೆಸರಿಡಬೇಕೆಂದು ಹಿಂದಿನ ರೈಲ್ವೆ ರಾಜ್ಯ ಸಚಿವ ದಿ.ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಸಂಸದೆ ಶೋಭಾ ಕರಂದ್ಲಾಜೆ ಕೋರಿದ್ದರು. ಕೇಂದ್ರ ಸರ್ಕಾರಕ್ಕೆ ಹಾಗೂ ರೈಲ್ವೆ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net