

ಕಾರವಾರ: ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದೆ. ಡಿಡಿಪಿಐ ಲತಾ ನಾಯಕ ಅವರ ನೇತೃತ್ವದ ಸಮಿತಿ ಬುಧವಾರ ಸಭೆ ಸೇರಿ ಶಿಕ್ಷಕರ ಪಟ್ಟಿಯನ್ನು ಅಂತಿಮಗೊಳಿಸಿತು. ಸೆ.5 ರಂದು ಬೆಳಗ್ಗೆ 10 ಗಂಟೆಗೆ ಕುಮಟಾ ಬಗ್ಗೋಣ ನಾಮಧಾರಿ ಸಭಾಭವನದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಿಡಿಪಿಐ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹಬ್ಬುವಾಡ ಶಾಲೆಯ ನಾಗವೇಣಿ ಶಿವಾನಂದ ನಾಯಕ, ಅಂಕೋಲಾ ಹಟ್ಟಿನ ಹಕ್ಕಲು ಶಾಲೆಯ ಬಾಬು ಬುಧದಂತ ಗೌಡ, ಕುಮಟಾ ತಾರಿಬಾಗಿಲು ನಂ -2 ಶಾಲೆಯ ಉಷಾಬಾಯಿ ಗಣಪತಿ ನಾಯ್ಕ, ಹೊನ್ನಾವರ ಅನಂತವಾಡಿ ಕೋಟಾದ ಸುನಂದಾ ಕೃಷ್ಣÀ್ಣ ಭಟ್ಟ, ಭಟ್ಕಳ ಹಡಾಳ ಶಾಲೆಯ ಸುಮನಾ ಕೆ. ಆಯ್ಕೆಯಾಗಿದ್ದಾರೆ.
ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕಾರವಾರ ಶಾಸಕರ ಮಾದರಿ ಶಾಲೆಯ ಮಾಲಿನಿ ಕೃಷ್ಣÀ್ಣ ನಾಯಕ, ಅಂಕೋಲಾ ಕೇಣಿ ಮೀನುಗಾರಿಕೆ ಶಾಲೆಯ ಸಾವಿತ್ರಿ ಹಮ್ಮಣ್ಣ ನಾಯಕ, ಕುಮಟಾ ಉಪ್ಪಿನಪಟ್ಟಣ ಶಾಲೆಯ ಶ್ಯಾಮಲಾ ಸುಬ್ರಾಯ ಹೆಗಡೆ, ಹೊನ್ನಾವರ ಅಪ್ಸರಕೊಂಡ ಗಣಪಯ್ಯ ಈರ ಗೌಡ, ಭಟ್ಕಳ ಚಾಲೆಯ ಪಿಎಂಶ್ರೀ ಶಾಲೆಯ ವಾಸು ಡಿ ನಾಯ್ಕ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ಚೆಂಡಿಯಾ ನ್ಯೂ ಇಂಗ್ಲಿಷ್ ಸ್ಕೂಲ್‌ನ ತಿಮ್ಮಪ್ಪ ಪರಮೇಶ್ವರ ನಾಯಕ, ಅಂಕೋಲಾ ಶೆಟಗೇರಿ ಸತ್ಯಾಗ್ರಹ ಸ್ಮಾರಕ ವಿದ್ಯಾಲಯದ ನೇಮಸಿಂಗ ವಾಲಪ್ಪ ರಾಠೋಡ, ಗೋಕರ್ಣ ಬಿಸಿಪಿಯು ಕಾಲೇಜ್‌ನ ಚಂದ್ರಶೇಖರ ಗೌಡಣ್ಣ ನಾಯಕ ದೊರೆ, ಹೊನ್ನಾವರ ಕರ್ಕಿ ಚೆನ್ನಕೇಶವ ಪ್ರೌಢಶಾಲೆಯ ಶ್ರೀಕಾಂತ ಭೀಮಪ್ಪ ಹಿಟ್ನಳ್ಳಿ, ಭಟ್ಕಳ ಬೈಲೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಸುಜಾತಾ ಟಿ ಹೊರ್ಟಾ ಆಯ್ಕೆಯಾಗಿದ್ದಾರೆ.