ಹಿಂಬದಿಯಿಂದ ಬೈಕ್​ಗೆ ಡಿಕ್ಕಿ ಹೊಡೆದ ಕಾರು; ಸವಾರ ಸ್ಥಳದಲ್ಲೇ ಸಾವು

accident
Published on

ಉತ್ತರಕನ್ನಡ: ಬೈಕ್​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಜಾಕ್ ಫರ್ನಾಂಡೀಸ್ ಮೃತ ಬೈಕ್ ಸವಾರ. ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ಈ ದುರ್ಘಟನೆ ನಡೆದಿದೆ.

ಬಿಣಗಾ ಕಡೆಯಿಂದ ಚೆಂಡಿಯಾ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸವಾರನಿಗೆ ಹಿಂದಿನಿಂದ ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಜ್ಜು ಗುಜ್ಜಾಗಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net