ಅಂಗನವಾಡಿಗಳಲ್ಲಿ ಶೇ.100 ರಷ್ಟು ಹಾಜರಾತಿ ಇರುವಂತೆ ನೋಡಿಕೊಳ್ಳಿ

TP Meeting
Published on

ಕಾರವಾರ: ಅಂಗನವಾಡಿಗಳಲ್ಲಿ ಶೇ.100 ರಷ್ಟು ಹಾಜರಾತಿ ಇರುವಂತೆ ನೋಡಿಕೊಳ್ಳಿ ಎಂದು ತಾಪಂ ಆಡಳಿತ ಅಽಕಾರಿ ಸೋಮಶೇಖರ ಮೇಸ್ತ ಸೂಚನೆ ನೀಡಿದರು.

ಕಾರವಾರ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂಗನವಾಡಿಗಳಲ್ಲಿ ನೋಂದಣಿಯಾದಷ್ಟು ಮಕ್ಕಳ ಹಾಜರಾತಿ ಇರುವುದು ಕಂಡುಬAದಿದೆ. ಈ ಬಗ್ಗೆ ಗಮನ ಹರಿಸಬೇಕು ಎಂದರು. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ತಾಲೂಕಿನ 40 ಕ್ಕೂ ಅಽಕ ಶಾಲೆಗಳಲ್ಲಿ 10 ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಮಕ್ಕಳ ಸಂಖ್ಯೆ ಹೆಚ್ಚಿಸಲು ಶಿಕ್ಷಕರು ಪ್ರೇರಣೆ ನೀಡಬೇಕು ಎಂದು ಬಿಇಒ ಅವರಿಗೆ ಸೂಚಿಸಿದರು.

ಮಳೆಗಾಲ ಶುರುವಾಗಿದ್ದು, ಶಾಲೆ, ಅಂಗನವಾಡಿ ಕಟ್ಟಡಗಳು ಶಿಥಿಲವಾಗಿದ್ದರೆ ಅಲ್ಲಿಂದ ಮಕ್ಕಳನ್ನು ಸ್ಥಳಾಂತರ ಮಾಡಬೇಕು. ಶಾಲೆ, ಅಂಗನವಾಡಿ ಮತ್ತು ಹಾಸ್ಟೆಲ್ ಕಟ್ಟಡಗಳ ಮೇಲೆ ಮರಗಳು ಬೀಳುವಂಥ ಪರಿಸ್ಥಿತಿ ಇದ್ದರೆ ಅದರ ಪಟ್ಟಿಯನ್ನು ಅರಣ್ಯ ಇಲಾಖೆಗೆ ನೀಡಿ. ಅವುಗಳನ್ನು ತೆರವು ಮಾಡಲು ಕ್ರಮ ವಹಿಸಲಾಗುವುದು. ನೀರು ನಿಲ್ಲದಂತೆ ಗ್ರಾಪಂಗಳಲ್ಲಿ ಎಚ್ಚರಿಕೆ ವಹಿಸಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಲಿಂಕ್ ಡಾಕ್ಯುಮೆಂಟ್ ಅನುದಾನ ಮಂಜೂರಾಗಿದ್ದು, ಜೂನ್ 15 ರ ಒಳಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ, ಅದನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು. ಜುಲೈ ಅಂತ್ಯದ ಒಳಗೆ ಅನುಮೋದನೆ ಪಡೆದು, ಆಗಸ್ಟ್ ನಲ್ಲಿ ಟೆಂಡರ್ ಕರೆದು, ಮಳೆಗಾಲ ಮುಗಿಯುವ ಹೊತ್ತಿಗೆ ಕಾರ್ಯಾದೇಶ ನೀಡಲು ಸಿದ್ಧತೆ ಮಾಡಿಕೊಳ್ಳಿ ಯಾವುದೇ ಕಾರಣಕ್ಕೂ ವಿಳಂಬವಾಗದAತೆ ನೋಡಿಕೊಳ್ಳಿ ಎಂದು ಕರೆ ನೀಡಿದರು. ತಾಪಂ ಇಒ ವೀರನಗೌಡ ಏಗನಗೌಡರ್ ವೇದಿಕೆಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net