Karwar ಏಪ್ರಿಲ್‌ 18 ರಿಂದ 22 ರವರೆಗೆ ಕರಾವಳಿ ಉತ್ಸವ

Karwar
Published on

ಕಾರವಾರ Karwar:  ನಗರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18 ರಿಂದ 22 ವರೆಗೆ 5 ದಿನಗಳವರೆಗೆ ಕರಾವಳಿ ಉತ್ಸವ 2025 ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಂಣದಲ್ಲಿ, ಕರಾವಳಿ ಉತ್ಸವ ಹಾಗೂ ಶಿವರಾತ್ರಿ ಆಚರಣೆ ಕುರಿತಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Karwar

ಜಿಲ್ಲಾ ಮಟ್ಟದ ಕರಾವಳಿ ಉತ್ಸವ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ತಿಳಿಸಿದ ಅವರು, ರಾಷ್ಟç ಹಾಗೂ ರಾಜ್ಯ ಮಟ್ಟದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಸಂಬoಧ ಕಲಾವಿದರನ್ನು ಸಂಪರ್ಕಿಸುವಂತೆ ಮತ್ತು ಸ್ಥಳೀಯ ಕಲಾವಿದರಿಗೂ ಕಾರ್ಯಕ್ರಮದಲ್ಲಿ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಡಳಿತ ವತಿಯಿಂದ ಫೆ.26 ರಂದು ಮುರ್ಡೇಶ್ವರದಲ್ಲಿ ಶ್ರದ್ದಾ ಭಕ್ತಿ ಪೂರ್ವಕವಾಗಿ ಶಿವರಾತ್ರಿ ಆಚರಣೆಯನ್ನು ಹಾಗೂ ಫೇ.27 ರಂದು ಗೋಕರ್ಣದಲ್ಲಿ ಶಿವರಾತ್ರಿ ಆಚರಿಸಲಾಗುವುದು ಎಂದ ಸಚಿವರು, ಸರ್ಕಾರದಿಂದ ಯಾವುದೇ ಅನುದಾನವಿಲ್ಲದೆ ಕಳೆದ ವರ್ಷ ವಿಜೃಂಭಣೆಯಿAದ ಶಿವರಾತ್ರಿ ಆಚರಿಸಲಾಗಿತ್ತು. ಅದರಂತೆ ಈ ಬಾರಿಯು ವಿವಿಧ ಸಂಘ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಹಾಗೂ ಎಲ್ಲಾ ಸಹಕಾರದಿಂದ ಭಕ್ತಿ ಪೂರ್ವಕವಾಗಿ ಆಚರಿಸಲಾಗುವುದು ಎಂದರು.

ಕದಂಬೊತ್ಸವ ಆಚರಣೆ ಕುರಿತಂತೆ ಶಿರಸಿಯಲ್ಲಿ ಪ್ರತ್ಯೇಕ ಸಭೆ ಆಯೋಜಿಸಿ ದಿನಾಂಕ ನಿಗಧಿಪಡಿಸಲಾಗುವುದು ಎಂದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಕೆ ಸೈಲ್, ಶಾಸಕರಾದ ಭೀಮಣ್ಣ ಟಿ ನಾಯ್ಕ, ದಿನಕರ ಶೆಟ್ಟಿ, ವಿಧಾನ ಪರಿಷತ್ ಶಾಸಕಗಣಪತಿ ಡಿ ಉಳ್ವೇಕರ್, ಜಿಲ್ಲಾಧಿಕಾರಿ ಕೆ. ಲ್ಕಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಯಣ ಎಂ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪ ವಿಭಾಗಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net