ವಿಎಸ್‌ಕೆಯುಗೆ ನೂತನ ಕುಲಸಚಿವರಾಗಿ ಎಸ್.ಎನ್.ರುದ್ರೇಶ್ ಅಧಿಕಾರ ಸ್ವೀಕಾರ

BLY- 13-4
ಎಸ್.ಎನ್.ರುದ್ರೇಶ್
Published on

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಎನ್. ರುದ್ರೇಶ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.

ಅವರು ಈ ಹಿಂದೆ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕುಲಸಚಿವರಾಗಿದ್ದ ಪ್ರೊ.ಎಸ್.ಸಿ.ಪಾಟೀಲ್ ಅವರು ರುದ್ರೇಶ್ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರ ಮಾಡಿದರು ಎಂದು ವಿವಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net