7 ರಂದು ಹಿರಿಯ ಸಾಹಿತಿಗಳಿಗೆ ಸನ್ಮಾನ

1000762708
Published on

ಹಿರೀಸಾವೆಯಲ್ಲಿ ಕನ್ನಡ ರಾಜ್ಯೋತ್ಸವ

ಹಿರೀಸಾವೆ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಿರೀಸಾವೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನ.7 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಕಸಾಪ ಹೋಬಳಿ ಅಧ್ಯಕ್ಷ ಎಚ್.ಎ. ಪ್ರಮೋದ್ ಹೇಳಿದರು.

ಪರಿಷತ್ ಹೋಬಳಿ ಘಟಕದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರ ನುಡಿ ನಮನ ಹಾಗೂ ಹಿರಿಯ ಸಾಹಿತಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮಣಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಾಹಿತಿಗಳಾದ ಮೇಟಿಕೆರೆ ಹಿರಿಯಣ್ಣ, ಹೊಸೂರು ತಮ್ಮಣ್ಣಗೌಡ ಹಾಗೂ ಡಾ.ಚಂದ್ರೇಗೌಡ ನಿಂಬೇಹಳ್ಳಿ ಅವರನ್ನು ಅಭಿನಂದಿಸಲಾಗುವುದು ಎಂದು ತಿಳಿಸಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಎಚ್.ಪಿ.ಶಂಕರ್, ಉಪಾಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿಗಳಾದ ಮಂಜುನಾಥ್, ಹರೀಶ್, ಖಜಾಂಚಿ ತೋಟಿ ಮಂಜು, ಪದಾಧಿಕಾರಿ ಪುರುಷೋತ್ತಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net