ಅಡ್ಕ ಗೋಪಾಲಕೃಷ್ಣ ಭಟ್ಟರಿಗೆ ಕಸಾಪ ಅಭಿನಂದನೆ

New Project (14)
Published on

ಕಾಸರಗೋಡು: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ’ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ’ ಕಾರ್ಯಕ್ರಮದಂಗವಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ಕಲಾವಿದ ಅಡ್ಕ ಗೋಪಾಲಕೃಷ್ಣ ಭಟ್ ಅವರನ್ನು ಮುಳಿಯಾರಿನ ಅಡ್ಕದಲ್ಲಿರುವ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿ, ಅಡ್ಕ ಗೋಪಾಲಕೃಷ್ಣ ಭಟ್, ಸುಮತಿ.ಕೆ ದಂಪತಿಯನ್ನು ಅಭಿನಂದಿಸಿದರು. ಹಿರಿಯ ತಾಳಮದ್ದಳೆ ಅರ್ಥಧಾರಿ ಬೆಳ್ಳಿಗೆ ನಾರಾಯಣ ಮಣಿಯಾಣಿ ಅಭಿನಂದನಾ ಭಾಷಣ ಮಾಡಿದರು. ನಿವೃತ್ತ ಸಹಾಯಕ ಶಿಕ್ಷಣಾಧಿಕಾರಿ ಯತೀಶ ಕುಮಾರ್ ರೈ, ಯಕ್ಷಗಾನ ಭಾಗವತ ತಲ್ಪನಾಜೆ ವೆಂಕಟ್ರಮಣ ಭಟ್, ನಿವೃತ್ತ ಮುಖ್ಯಶಿಕ್ಷಕ ಕೃಷ್ಣ ಭಟ್ ಅಡ್ಕ, ಪ್ರೇಮಲತ ಕೆ, ಕೃಷ್ಣ ಕುಮಾರ್ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ ನಿರೂಪಿಸಿದರು. ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net