ಕಸಾಪ ದತ್ತಿ ಪ್ರಶಸ್ತಿ ಪ್ರಕಟ

New Project (21)
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸಿಬ್ಬಂದಿಗಳಿಗೆ ನೀಡುವ ‘ ಶ್ರೀಮತಿ ಎಸ್.ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿ’ಗೆ ದಯಾನಂದ ಮೂರ್ತಿ ಹಾಗೂ ‘ಶ್ರೀಮತಿ ವಿ.ಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ಪ್ರಶಸ್ತಿ’ಗೆ ಎಂ.ಎನ್.ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಎಸ್.ರಮಾದೇವಿ ವಿಶ್ವೇಶ್ವರಯ್ಯ ಹಾಗೂ ಎಂ.ಜಿ. ನಾಗರಾಜ್ ಅವರು ಈ ದತ್ತಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದು, ಕನಿಷ್ಟ 10 ವರ್ಷ ಪರಿಷತ್ತಿನಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net