

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ವತಿಯಿಂದ ನೀಡಲಾಗುವ 2023ನೇ ಸಾಲಿನ ಮಾಹಿತಿ ಹಕ್ಕು ತಜ್ಞ ಜೆ.ಎಂ. ರಾಜಶೇಖರ ದತ್ತಿ ಪ್ರಶಸ್ತಿಗೆ ಡಾ. ವೈ.ಜಿ. ಮುರಳೀಧರ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಾಹಿತಿ ಹಕ್ಕು ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿ ನೀಡುವ ಮೂಲಕ ಈ ಕ್ಷೇತ್ರದ ಕುರಿತು ಸಾರ್ವಜನಿಕ ಅರಿವು ಹೆಚ್ಚಾಗುವಂತೆ ಮಾಡುವ ಉದ್ದೇಶದಿಂದ ಪಿ. ಮಹೇಶ್ ಎಂಬುವವರು ಮಾಹಿತಿ ಹಕ್ಕು ತಜ್ಞ ಜೆ.ಎಂ. ರಾಜಶೇಖರ ದತ್ತಿ ಪ್ರಶಸ್ತಿ ಸ್ಥಾಪಿಸಿದ್ದಾರೆ.