ಎಫ್ಕೆಸಿಸಿಐ ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’

Kasapa - FKCCI - 1
Published on

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ 2024ನೇ ಸಾಲಿನ ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ’ (ಎಫ್ಕೆಸಿಸಿಐ) ಆಯ್ಕೆಯಾಗಿದೆ.

ಪರಿಷತ್ತು ಸ್ಥಾಪಕರಾದ ಶ್ರೀ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಸ್ಥಾಪಿತವಾಗಿರುವ ಈ ಪ್ರಶಸ್ತಿಯನ್ನು ಕೈಗಾರಿಕೆ, ಶಿಕ್ಷಣ, ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗದ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ, ವೈದ್ಯಕೀಯ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ಗಣನೀಯ ಕೊಡುಗೆ ನೀಡಿರುವ ಗಣ್ಯರಿಗೆ ಅಥವಾ ಸಂಸ್ಥೆಗೆ ನೀಡಬೇಕು ಎನ್ನುವುದು ದತ್ತಿಯ ಆಶಯವಾಗಿದೆ. ಅದರಂತೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net