

ಮಡಿಕೇರಿ:
ಜಿಲ್ಲೆಯ ನೂತನ ಜಿಲ್ಲಾಧಿಕಾರಿ ವೆಂಕಟರಾಜು ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಶುಕ್ರವಾರ ಭೇಟಿಯಾಗಿ ಜಿಲ್ಲೆಗೆ ಸ್ವಾಗತ ಕೋರಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಕನ್ನಡ ಶಲ್ಯ ಮತ್ತು ಕನ್ನಡದ ಪುಸ್ತಕವನ್ನು ಜಿಲ್ಲಾಧಿಕಾರಿಗೆ ನೀಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು. ಆ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ೮೧ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಶ್ರವಣಬೆಳಗೊಳದಲ್ಲಿ ನಡೆದ ಸಂದರ್ಭದಲ್ಲಿ ತಾವು ಸಕ್ರಿಯವಾಗಿ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದನ್ನು ನೆನಪಿಸಿಕೊಂಡಿದ್ದಲ್ಲದೆ ಕನ್ನಡದ ಎಲ್ಲಾ ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಇರುವುದಾಗಿ ತಿಳಿಸಿದರು. ಕಸಾಪ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಹಾಗೂ ರೇವತಿ ರಮೇಶ್ ಇದ್ದರು.