ಕನ್ನಡ ಉಳಿಸಿ ಬೆಳೆಸುವುದು ಸುಲಭದ ಕೆಲಸವಲ್ಲ

kasapa
ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಕಾಪು ಕಲ್ಯಾ ದೇವದಾಸ್ ಶೆಟ್ಟಿ ಅವರಿಗೆ ಕಸಾಪ ಜಿಲ್ಲಾ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.
Published on

ಪಡುಬಿದ್ರಿ: ಇಂದಿನ ಸನ್ನಿವೇಶದಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವುದು ಸುಲಭದ ಕೆಲಸವಲ್ಲ. ಶೇ.80ರಷ್ಟು ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಓದುತ್ತಿದ್ದಾರೆ. ಮುಂದೆ ಕನ್ನಡ ಮಾತನಾಡುವ ಓದುವವರ ಸಂಖ್ಯೆ ಕಡಿಮೆ ಆಗುವ ಅಪಾಯದಲ್ಲಿದ್ದೇವೆ. ಇದು ಕನ್ನಡ ಸಾಹಿತ್ಯ ಪರಿಷತ್ತಿಗೂ ಸವಾಲಾಗಿದೆ ಎಂದು ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ ರುವಾರಿ ಕಾಪು ಕಲ್ಯಾ ದೇವದಾಸ್ ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಸಾಪ ಕಾಪು ಘಟಕ ಸಹಭಾಗಿತ್ವದಲ್ಲಿ ಕಾಪು ಕಲ್ಯಾದಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಗೌರವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ನ.16ರಂದು ಪಲಿಮಾರಿನಲ್ಲಿ ನಡೆಯುವ ಕಾಪು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ದೇವದಾಸ್ ಶೆಟ್ಟಿ ಬಿಡುಗಡೆಗೊಳಿಸಿದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು.

ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಮನೋಹರ ಪಿ.ವಸಂತಿ ದೇವದಾಸ್ ಶೆಟ್ಟಿ, ಕೊರಗ ಸಮುದಾಯದ ಪ್ರಮುಖರಾದ ಗಣೇಶ್ ಕುಂದಾಪುರ, ಗಣೇಶ ಬಾರ್ಕೂರು, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಸುಧಾಕರ ಶೆಣೈ ಪಿಲಾರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಆಶಯ ಮಾತುಗಳನ್ನಾಡಿದರು. ತಾಲೂಕು ಘಟಕದ ಕೋಶಾಧಿಕಾರಿ ವಿದ್ಯಾಧರ್ ಪುರಾಣಿಕ್ ಸ್ವಾಗತಿಸಿದರು. ಕಾರ್ಯದರ್ಶಿ ನೀಲಾನಂದ ನಾಯ್ಕ ಸನ್ಮಾನಪತ್ರ ವಾಚಿಸಿದರು. ವಿದ್ಯಾ ಅಮ್ಮಣ್ಣಾಯ ಪರಿಚಯಿಸಿದರು. ಅನಂತ ಮೂಡಿತ್ತಾಯ ನಿರೂಪಿಸಿದರು. ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net