ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಹಕಾರ

BIEL
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸಪಾ ಅಧ್ಯಕ್ಷ ನಾಡೋಜ ಡಾ.ಮಹೇಶ್‌ಜೋಶಿ ಹಾಗೂ ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ ಪಾಂಡು ಅವರು ಬಿಎಐಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯ ನಿರ್ವಾಹಕ ಅಧಿಕಾರಿ ಹರಿಮಾರರ್ ಅವರೊಂದಿಗೆಕನ್ನಡ ಭಾಷೆ, ಕಲೆ, ಮತ್ತು ನಾಡಿನ ಸಂಸ್ಕೃತಿ ಬಗ್ಗೆ ಚರ್ಚಿಸಿದರು.
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೆಂಬಲ ನೀಡಲು ಬಿಎಲ್ಆರ್ ವಿಮಾನ ನಿಲ್ದಾಣವು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ವಿಮಾನ ನಿಲ್ದಾಣದಲ್ಲಿ ಪ್ರತಿನಿಧಿಗಳನ್ನು ಬರಮಾಡಿಕೊಳ್ಳಲು ಸ್ವಾಗತ ಡೆಸ್ಕ್ ಮತ್ತು ಫೋಟೋ ಬೂತ್‌ಗಳನ್ನು ಒದಗಿಸಲಿದೆ. ಇದಲ್ಲದೆ, ವಿಮಾನ ನಿಲ್ದಾಣದ ವತಿಯಿಂದ ಈ ಸಮ್ಮೇಳನದ ಬಗ್ಗೆ ಮಾಹಿತಿ ಪ್ರದರ್ಶಿಸಲು ಡಿಜಿಟಲ್ ಮಾಧ್ಯಮವನ್ನು ಬಳಸುತ್ತದಲ್ಲದೆ ಹಲವು ಮನರಂಜನಾ ಚಟುವಟಿಕೆಗಳ ಮೂಲಕ ಪ್ರಯಾಣಿಕರನ್ನು ತೊಡಗಿಸಿಕೊಂಡು ಕನ್ನಡ ಭಾಷೆಯ ಪ್ರಚಾರ ಮಾಡಲಿದೆ ಎಂದು ಬಿಎಐಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯ ನಿರ್ವಾಹಕ ಅಧಿಕಾರಿ ಹರಿಮಾರರ್ ತಿಳಿಸಿದರು.ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್‌ಜೋಶಿ ಅವರು, ಬಿಎಐಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯ ನಿರ್ವಾಹಕ ಅಧಿಕಾರಿ ಹರಿಮಾರರ್ ಅವರನ್ನು ಸೋಮವಾರ ಭೇಟಿ ಮಾಡಿ ಕನ್ನಡ ಭಾಷೆ, ಕಲೆ, ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ ವೇಳೆ ಈ ಪ್ರತಿಕ್ರಿಯೆ ನೀಡಿದರು. ಕರ್ನಾಟಕದ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ಪೋಷಿಸಲು ಮತ್ತು ಪ್ರೋತ್ಸಾಹಿಸಲು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆ ಬದ್ಧವಾಗಿದೆ ಎಂದು ಎಂದು ಹರಿಮರಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net