ಕೆಂಗಲ್ ಪ್ರಶಸ್ತಿಗೆ ಬಿ.ಎಸ್.ವೈ ಆಯ್ಕೆ

BSY
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿ (ಕಸಾಪ) ನೀಡುವ 2023ನೇ ಸಾಲಿನ ‘ಕೆಂಗಲ್ ಹನುಮಂತಯ್ಯ ಪ್ರಶಸ್ತಿ’ಗೆ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಪರಂಪರೆ ಪೋಷಕರಾಗಿರುವ ಇಲ್ಲವೆ ಈ ಕ್ಷೇತ್ರಗಳಲ್ಲಿ ಕನಿಷ್ಟ 25 ವರ್ಷಗಳಿಂದ ಸೇವಾ ನಿರತರಾಗಿರುವ 50 ವರ್ಷ ವಯೋಮಾನ ಮೀರಿದ ವ್ಯಕ್ತಿ, ಸಂಘ, ಸಂಸ್ಥೆಗಳನ್ನು ಆಯ್ಕೆ ಮಾಡುವುದು ಈ ದತ್ತಿ ನಿಧಿಯ ಆಶಯವಾಗಿದೆ. ಅದರನ್ವಯ 2016ರಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ.

ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ, ಮೂರು ಬಾರಿ ವಿರೋಧ ಪಕ್ಷದ ನಾಯಕರಾಗಿ ರಾಜಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿರುವ ಬಿ.ಎಸ್.ಯಡಿಯೂರಪ್ಪನವರು ತಮ್ಮ ಅಧಿಕಾರವಧಿಯಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net