

ಮಂಡ್ಯ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನ ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ ನೇಮಕಗೊಂಡಿದ್ದಾರೆ ಎಂದು ಪರಿಷತ್ ಆಜೀವ ಸದಸ್ಯ ಚಂದಗಾಲು ಲೋಕೇಶ್ ತಿಳಿಸಿದರು.
ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಡಾ.ಎಚ್.ಎಸ್.ಮುದ್ದೇಗೌಡರು ತಮ್ಮ ಇಳಿವಯಸ್ಸಿನಲ್ಲೇ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹವರನ್ನು ಪರಿಷತ್ತಿನ ಸಂಘಸಂಸ್ಥೆಗಳ ಪ್ರತಿನಿಧಿ ಸ್ಥಾನ ದೊರೆತಿರುವುದು ಮಂಡ್ಯ ಜಿಲ್ಲೆಗೆ ಸಂದ ಗೌರವವಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಸಂತಸ ವ್ಯಕ್ತಪಡಿಸಿದರು.
ಕಸಾಪ ಕೇಂದ್ರ ಘಟಕದ ಸಂಘಸಂಸ್ಥೆಗಳ ಪ್ರತಿನಿಧಿ ಡಾ.ಎಚ್.ಎಸ್.ಮುದ್ದೇಗೌಡ ಮಾತನಾಡಿ, ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನ ನಡೆಸಲು ತಾವು ಉತ್ಸುಕನಾಗಿದ್ದೇನೆ. ಈ ಸಂಬಂಧ ರಾಜ್ಯಾಧ್ಯಕ್ಷ ಹಾಗೂ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಂಡ್ಯ ಜಿಲ್ಲೆಯ ಸಾಹಿತಿಗಳು, ಲೇಖಕರಿಗೆ ಸೂಕ್ತ ಅವಕಾ ದೊರಕಿಸಿಕೊಡಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಎಸ್.ಕೃಷ್ಣ ಸ್ವರ್ಣಸಂದ್ರ, ಎಚ್.ಸಿ.ಮಂಜುನಾಥ್, ಅಂದಾನಿ ಹಾಜರಿದ್ದರು.