ಕನ್ನಡದ ಕೆಲಸಕ್ಕೆ ಎಲ್ಲರೂ ಒಗ್ಗೂಡಲಿ: ಸಮ್ಮೇಳನಾಧ್ಯಕ್ಷೆ ಡಾ.ಲೀಲಾ ಅಪ್ಪಾಜಿ ಹೇಳಿಕೆ

03_12_Mdy_06(Kasapa)
Published on
ಮಂಡ್ಯ: ಕನ್ನಡದ ಕೆಲಸಕ್ಕೆ ಎಲ್ಲರೂ ಒಗ್ಗೂಡುವ ಕೆಲಸ ನಿರಂತರವಾಗಿ ನಡೆಯಲಿ ಎಂದು 17ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಡಾ.ಲೀಲಾ ಅಪ್ಪಾಜಿ ಹೇಳಿದರು.
ನಗರದಲ್ಲಿ ಸಮ್ಮೇಳನಕ್ಕೆ ಆಹ್ವಾನ ಹಾಗೂ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಕನ್ನಡವನ್ನು ಬೆಳೆಸಲು ಮಂಡ್ಯ ತಾಲೂಕಿನ ಜನರು ಜತೆಗೂಡಲಿ. ಸಮ್ಮೇಳನಾಧ್ಯಕ್ಷತೆಗೆ ಆಯ್ಕೆ ಮಾಡಿದ್ದಕ್ಕೆ ಕಸಾಪಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಕಸಾಪ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ ಮಾತನಾಡಿ, ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ಸಮ್ಮೇಳನದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸ್ವಾಗತ ಸಮಿತಿ ಗೌರವಾಧ್ಯಕ್ಷರೂ ಆದ ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು, ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಮಂಡ್ಯ ತಾಲೂಕು ಕಸಾಪ ಅಧ್ಯಕ್ಷ ಮಂಜು ಮುತ್ತೇಗೆರೆ, ಸುಜಾತಾ ಕೃಷ್ಣ, ಧರಣೇಂದ್ರಯ್ಯ, ಚಂದ್ರಲಿಂಗು, ಧನಂಜಯ, ಮಿಮ್ಸ್ ಪಿಆರ್‌ಒ ಉಮೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net