ಕಸಾಪ ಮಂಗಳೂರು ಘಟಕ ಸಂಘಟನಾ ಕಾರ್ಯದರ್ಶಿಗಳ ನೇಮಕ

Kasapa
ಕಾ.ವೀ.ಕೃಷ್ಣದಾಸ್, ಗುರುಪ್ರಸಾದ್ ಕಡಂಬಾರ್
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಸಂಘಟಕರಾದ ಕಾ.ವೀ.ಕೃಷ್ಣದಾಸ್ ಮತ್ತು ಗುರುಪ್ರಸಾದ್ ಕಡಂಬಾರ್ ಅವರನ್ನು ನೇಮಕ ಮಾಡಿ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಮಂಜುನಾಥ್ ಎಸ್.ರೇವಣ್ಕರ್ ಆದೇಶ ಹೊರಡಿಸಿದ್ದಾರೆ.

ತಾಲೂಕಿನಲ್ಲಿ ಸಂಘಟನಾತ್ಮಕವಾಗಿ ಕಾರ್ಯ ಚಟುವಟಿಕೆ ರೂಪಿಸಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕ್ರಿಯಾಶೀಲವಾಗಿರಿಸಲು ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಸೂಚನೆಯಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net