ಜೀವನದ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ

30.npk-3
Published on

ನಾಪೋಕ್ಲು: ವಿದ್ಯಾರ್ಥಿಗಳು ಮೊಬೈಲ್ ಫೋನ್ ಗೀಳನ್ನು ಬಿಟ್ಟು, ಪಠ್ಯದ ಪರೀಕ್ಷೆಯೊಂದಿಗೆ ಜೀವನದ ಪರೀಕ್ಷೆಯಲ್ಲೂ ಉತ್ತೀರ್ಣರಾಗಬೇಕು ಎಂದು ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆ ಅಧ್ಯಾಪಕಿ ಕೆ.ಬಿ. ಉಷಾರಾಣಿ ಹೇಳಿದರು.
ಕೊಡಗು ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕಗಳು ಮಡಿಕೇರಿ ಸರ್ಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದಿ.ಸೂದನ ರಾಘವಯ್ಯ ದತ್ತಿನಿಧಿ ಕಾರ್ಯಕ್ರಮದಲ್ಲಿ ಅವರು ದತ್ತಿ ಉಪನ್ಯಾಸ ನೀಡಿದರು.
ವಿಷಯಧಾರಿತ ಪುಸ್ತಕಗಳನ್ನು ಬೋಧನೆ ಮಾಡುವ ಶಿಕ್ಷಕರನ್ನು ಪ್ರೀತಿಸಿ ಸಹನೆಯಿಂದ ಶಿಕ್ಷಣವನ್ನು ಬೋಧಿಸುವ ಶಿಕ್ಷಕರನ್ನು ಗೌರವಿಸಿ ಅವರ ಸಕಾರಾತ್ಮಕ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾಧನೆ ಸುಲಭವಾಗುತ್ತದೆ ಎಂದರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಜವರಪ್ಪ, ಕಸಾಪ ಕೇವಲ ಸಾಹಿತ್ಯ ಚಟುವಟಿಕೆಗಳಿಗೆ ಸೀಮಿತವಾಗದೇ ದತ್ತಿನಿಧಿಯಂಥಹಾ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಪಯುಕ್ತವಾಗುವ ಉಪನ್ಯಾಸಗಳನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ ಎಂದರು.ದತ್ತಿ ದಾನಿ ಮಲೆಬಾವು ಉಷಾ ರವಿ ಮಾತನಾಡಿ, ತಂದೆ ಸೂದನ ರಾಘವಯ್ಯ ಹೆಸರಿನಲ್ಲಿ ದತ್ತಿ ಸ್ಥಾಪನೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಂಡು ಪ್ರಗತಿ ಹೊಂದಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net