ತಾಲೂಕು ಸಮ್ಮೇಳನ ಯಶಸ್ವಿಗೊಳಿಸಿ: ಕಸಾಪ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ ಮನವಿ

08M.D.R.1
Published on

ಮದ್ದೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಾ.2ರಂದು 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಜನತೆ ಹಾಗೂ ಸಾಹಿತ್ಯಾಸಕ್ತರು ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ ಮನವಿ ಮಾಡಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಗಣ್ಯರು, ಕನ್ನಡಪರ ಹೋರಾಟಗಾರರು, ಯುವ ಸಾಹಿತಿಗಳು, ವಿದ್ಯಾರ್ಥಿಗಳು, ಚಿತ್ರನಟರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದು, ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಪ್ರೇಮಿಗಳು ಆಗಮಿಸಿ ಯಶಸ್ವಿಗೊಳಿಸಬೇಕು ಎಂದರು.
ಕಸಾಪ ತಾಲೂಕು ಅಧ್ಯಕ್ಷ ವಿ.ಸಿ.ಉಮಾಶಂಕರ್ ಮಾತನಾಡಿ, ತಾಲೂಕಿನಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ ಮಾತನಾಡಿ, ಮಾ.2 ರಂದು ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ತಾಲೂಕು ಆಡಳಿತ ಸಂಪೂರ್ಣ ಸಹಕಾರ ನೀಡಲಿದೆ. ತಾಲೂಕಿನ ಜನತೆ ಭಾಗವಹಿಸುವುದರ ಜತೆಗೆ ಸಮ್ಮೇಳನಕ್ಕೆ ಸಹಕಾರ ನೀಡಬೇಕೆಂದು ತಿಳಿಸಿದರು.
ಬಿಇಒ ಸಿ.ಎಚ್.ಕಾಳಿರಯ್ಯ, ತಾಲೂಕು ಆರೋಗ್ಯಾಧಿಕಾರಿ ರವೀಂದ್ರ, ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕ್ರಾಂತಿ ಸಿಂಹ, ಪ್ರಗತಿಪರ ಸಂಘಟನೆಯ ಮಾರ್ಗದರ್ಶಕ ನಲಿಕೃಷ್ಣ, ರೈತ ಸಂಘಟನೆ ನಾಗರಾಜು, ಕೆ.ಜಿ.ಉಮೇಶ್, ಸೊ.ಶಿ.ಪ್ರಕಾಶ್, ಸೋಂಪುರ ಉಮೇಶ್, ಸಾಗರ್, ಶ್ರೀಕಂಠಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪ್ರಗತಿಪರ ಸಂಘಟನೆಯ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net