

ಉಡುಪಿ: ಕೋಟದ ವಿವೇಕ ವಿದ್ಯಾಲಯದಲ್ಲಿ ಡಿ.5 ಮತ್ತು 6ರಂದು ಕನ್ನಡ ಸಾಹಿತ್ಯ ಪರಿಷತ್ನ ಉಡುಪಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಬಾಬು ಶಿವ ಪೂಜಾರಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ ಹೆಬ್ಬಾಳ್ಕರ್ ಸಾಂಸತಿಕ ಕಾರ್ಯಕ್ರಮ ಅನಾವರಣಗೊಳಿಸಲಿದ್ದಾರೆ. ಇದೇ ವೇಳೆ ಒಂಬತ್ತು ಪುಸ್ತಕಗಳನ್ನು ಕಸಾಪ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ಬಿಡುಗಡೆ ಮಾಡಲಿದ್ದಾರೆ. ಶಾಸಕರಾದ ಎ.ಕಿರಣಕುಮಾರ ಕೊಡ್ಗಿ, ಗುರುರಾಜ ಗಂಟಿಹೊಳೆ, ಯಶ್ಪಾಲ್ ಸುವರ್ಣ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಸಾಪ ಗೌರವ ಕಾರ್ಯದರ್ಶಿ ಕೋಟ ನರೇಂದ್ರಕುಮಾರ್ ಮಾತನಾಡಿ, ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು "ಅನುಸಂಧಾನ' ಭಾಷೆಗೂ ಮೀರಿದ ಭಾವನೆ ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದೆ. ಸಾಂಸತಿಕ ಚಿಂತಕ ಮನು ಹಂದಾಡಿ ಅವರು ಹ್ವಾಯ್&ಕುಂದಾಪ್ರ ಕನ್ನಡ ಭಾಷಿ ಅಲ್ಲ ಬದ್ಕ್ ಕುರಿತು ವಿಷಯ ಮಂಡಿಸಲಿದ್ದಾರೆ. ಜಿಲ್ಲಾ ಕನ್ನಡ ಮತ್ತು ಸಂಸತಿ ಇಲಾಖೆಯ ಸಹಕಾರದಲ್ಲಿ ಸಾಂಸತಿಕ ಮೆರವಣಿಗೆ ಆಯೋಜಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕೋಶಾಧ್ಯಕ್ಷ ಮನೋಹರ ಪಿ., ಪ್ರಚಾರ ಸಮಿತಿಯ ನರಸಿಂಹಮೂರ್ತಿ ಮಣಿಪಾಲ, ಜಿಲ್ಲಾ ಸಮಿತಿ ಸದಸ್ಯ ಭುವನೇಂದ್ರ ಪ್ರಸಾದ ಹೆಗಡೆ ಇದ್ದರು.