ರಾಷ್ಟ್ರೀಯ ಶಿಕ್ಷಣ ನೀತಿಗೆ ಬದ್ಧತೆ : ಟಿ.ಅನೂಪ್ ಕುಮಾರ್ ಆಗ್ರಹ

New Project (54)
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಕೇರಳ ಸರ್ಕಾರ ಕೇಂದ್ರ ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದ್ಧವಾಗಿರಬೇಕು ಎಂದು ಎನ್.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಅನೂಪ್ ಕುಮಾರ್ ತಿಳಿಸಿದ್ದಾರೆ.

ಕೂಡ್ಲು ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಎನ್.ಟಿ.ಯು. ಕಾಸರಗೋಡು ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಸಂಘಟನೆ ಜಿಲ್ಲಾಧ್ಯಕ್ಷ ಟಿ.ಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯರಾದ ಅರವಿಂದಾಕ್ಷ ಭಂಡಾರಿ, ಸತೀಶ್ ಶೆಟ್ಟಿ, ಎಂ.ರಂಜಿತ್, ಬಿಎಂಎಸ್ ಜಿಲ್ಲಾ ಕಾರ್ಯದರ್ಶಿ ವಿ.ಕೆ.ಬಾಬು, ಪಿಂಚಣಿದಾರರ ಸಂಘ ಜಿಲ್ಲಾಧ್ಯಕ್ಷ ಬಿ.ನಾಗರಾಜ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಅಜಿತ್ ಕುಮಾರ್ ಸ್ವಾಗತಿಸಿದರು. ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷೆ ಕೆ.ಆರ್.ಚಂದ್ರಿಕಾ ವಂದಿಸಿದರು.

ಸಂಘಟನಾ ಸಮ್ಮೇಳನವನ್ನು ಎನ್‌ಟಿಯು ರಾಜ್ಯ ಉಪಾಧ್ಯಕ್ಷ ಪ್ರಭಾಕರನ್ ನಾಯರ್ ಉದ್ಘಾಟಿಸಿದರು. ಸತೀಶ್ ಕುಮಾರ್ ಶೆಟ್ಟಿ, ಕೆ.ಅಜಿತ್ ಕುಮಾರ್, ದಿನೇಶ್ ಪಿ., ಶರತ್‌ಕುಮಾರ್ ಉಪಸ್ಥಿತರಿದ್ದರು. ಸೇವೆಯಿಂದ ನಿವೃತ್ತರಾಗಲಿರುವ ಶಿಕ್ಷಕರಿಗೆ ನಡೆದ ಬೀಳ್ಕೊಡುಗೆ ಸಮಾರಂಭವನ್ನು ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಎಂ.ಎಲ್.ಅಶ್ವಿನಿ ಉದ್ಘಾಟಿಸಿದರು.

ಕೇರಳ ವನವಾಸಿ ವಿಕಾಸ ಕೇಂದ್ರ ಅಧ್ಯಕ್ಷ ಪಿ.ರಾಧಾಕೃಷ್ಣನ್, ಸುಚಿತಾ, ಬಾಲಕೃಷ್ಣ, ಕೆ.ವಿ.ಪ್ರದೀಪ್ ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಟಿ.ಕೃಷ್ಣನ್, ಕೆ.ಅಜಿತ್ ಕುಮಾರ್ ಕಾರ್ಯದರ್ಶಿ, ಮಹಾಬಲ ಭಟ್ ಅವರನ್ನು ಕೋಶಾಧಿಕಾರಿಯಾಗಿ ಆಯ್ಕೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net