ಕಸ್ತೂರಿ ರಂಗನ್ ವರದಿ ತಿರಸ್ಕಾರ ಸ್ವಾಗತಾರ್ಹ

Published on

ಸುಳ್ಯ: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿರುವುದು ಸ್ವಾಗತಾರ್ಹ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಭಿಪ್ರಾಯ ವ್ಯಕ್ತಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಗ್ರಾಮಗಳ ಅರಣ್ಯದಂಚಿನಲ್ಲಿ ಕೃಷಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಕೃಷಿಕರಿಗೆ ಸಮಸ್ಯೆ ಆಗಬಾರದು ಎಂಬುದು ಪಕ್ಷದ ನಿಲುವು. ಹೀಗಾಗಿ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇವೆ ಎಂದರು.

ಇದೇ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಯುವಕ ಕಿರುಕುಳ ನೀಡಿರುವ ಘಟನೆಯನ್ನು ಖಂಡಿಸಿದ ಅವರು ಆರೋಪಿ ಯುವಕನ ಮೇಲೆ ಗುಂಪು ಸೇರಿ ಹಲ್ಲೆ ಮಾಡಿರುವುದು ಕೂಡ ಖಂಡನೀಯ. ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದರು.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಡಿಸಿಸಿ ಉಪಾಧ್ಯಕ್ಷ ಎನ್.ಜಯಪ್ರಕಾಶ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಕಾಂಗ್ರೆಸ್ ಮುಖಂಡರಾದ ಕೆ.ಗೋಕುಲ್‌ದಾಸ್, ಸುರೇಶ್ ಎಂ.ಎಚ್., ಶಶಿಧರ ಎಂ.ಜೆ, ನಂದರಾಜ ಸಂಕೇಶ, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net