ಕಸ್ತೂರಬಾ ಆಸ್ಪತ್ರೆ ಮಾಹಿತಿ ಕೇಂದ್ರ ಆರಂಭ

Arogya card
Published on

ಶಿರಸಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆ ವತಿಯಿಂದ ನಗರದಲ್ಲಿ ಮಾಹಿತಿ ಕೇಂದ್ರ ಆರಂಭಿಸುತ್ತಿದೆ. ಇಲ್ಲಿಯೇ ವೈದ್ಯರ ಸಮಯ ಪಡೆದು ಆಸ್ಪತ್ರೆಗೆ ನೆರವಾಗಿ ತೆರಳಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯಿಂದ ಆಸ್ಪತ್ರೆಗೆ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಜಿಲ್ಲೆಯ ವಿವಿಧೆಡೆ ಮಾಹಿತಿ ಕೇಂದ್ರಗಳನ್ನು ತೆರೆಯಲಾಗಿದೆ. ಶಿರಸಿ ಮತ್ತು ಸುತ್ತಮುತ್ತಲಿನ ಜನತೆಗೆ ವೈದ್ಯರ ಭೇಟಿಗೆ ಹೆಸರು ನೋಂದಣಿ, ಒಪಿಡಿ ವೇಳಾಪಟ್ಟಿ ಲಭಿಸಲಿದೆ. ಹೀಗಾಗಿ, ಆಸ್ಪತ್ರೆಗೆ ತೆರಳಿ ಅಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪಲಿದೆ ಎಂದರು.

ಶಿರಸಿ ಮಾಹಿತಿ ಕೇಂದ್ರದ ಮುಖ್ಯಸ್ಥ ಜಿತೇಂದ್ರಕುಮಾರ, ಚೇತನ, ಪ್ರವೀಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net