

ಶಿಗ್ಗಾಂವಿ: ಬೈಕ್ ಡಿಕ್ಕಿಯಿಂದ ಕಟಮಾ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಹುಲಗೂರ-&ಬಸವನಾಳ ಗ್ರಾಮದ ಬಳಿ ಗುರುವಾರ ಸಂಭವಿಸಿದೆ.
ಬಸವನಾಳ ಗ್ರಾಮದ ದಾವಲಸಾಬ ಇಮಾಮಸಾಬ ಸಂದಿಮನಿ (42) ಮೃತ ವ್ಯಕ್ತಿ.
ಇವರು ಕಟಮಾ ವಾಹನದಲ್ಲಿ ತೆರಳುತ್ತಿದ್ದ ಸಮಯದಲ್ಲಿ ಎದುರಿಗೆ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ಕಟಮಾ ಪಲ್ಟಿಯಾಗಿದ್ದು ದಾವಲಸಾಬ ಕೆಳಗೆ ಸಿಲುಕಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.