

ಕಾನಹೊಸಹಳ್ಳಿ: ಗಡಿಗ್ರಾಮ ಕಾತ್ರಿಕೆಹಟ್ಟಿಯಲ್ಲಿ ಶುಕ್ರವಾರ ವಿದ್ಯುತ್ ತಂತಿ ಸ್ಪರ್ಶದಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ
ಗ್ರಾಮದ ಹಂಪಮ್ಮ-ಬೋರಣ್ಣ ದಂಪತಿ ಪುತ್ರಿ ತುಳಸಿ (8) ಮೃತೆ.
ಶುಕ್ರವಾರ ಬೆಳಗ್ಗೆ ಮನೆಯಿಂದ ಕಣಕ್ಕೆ ಹೋಗಿ ವಾಪಸ್ ಬರುವಾಗ ಬಾಲಕಿ ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ಗೈವಯರ್ ಮುಟ್ಟಿದ್ದು, ಶಾಕ್ ಹೊಡೆದಿದೆ. ಸ್ಥಳದಲ್ಲಿದ್ದವರು ರಕ್ಷಿಸಲು ಹೋಗುವಷ್ಟರಲ್ಲಿ ಬಾಲಕಿ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಸ್ಥಳಕ್ಕೆ ಜೆಸ್ಕಾಂ ಅಧಿಕಾರಿಗಳಾದ ಮಾರಪ್ಪ, ಪ್ರಹ್ಲಾದ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ಬಾಲಕಿಯ ಕುಟುಂಬಕ್ಕೆ ಪರಿಹಾರ ವಿತರಣೆ ಕುರಿತು ಮೇಲಧಿಕಾರಿಗಳಿಗೆ ವರದಿ ನೀಡುವುದಾಗಿ ತಿಳಿಸಿದರು. ಮಗಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮದ ಜನರ ಕಣ್ಣಾಲಿಗಳು ತುಂಬಿ ಬಂದವು.