ಕಟ್ಟೆ ಆಂಜನೇಯಸ್ವಾಮಿ ದೇಗುಲ ಲೋಕಾರ್ಪಣೆ

oplus_32
ಚುಂಚೇಗೌಡನದೊಡ್ಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟೆ ಆಂಜನೇಯಸ್ವಾಮಿ ದೇಗುಲದ ಮೂಲ ವಿಗ್ರಹವನ್ನು ಹೂಗಳಿಂದ ಅಲಂಕಾರ ಮಾಡಿರುವುದು.
Published on

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚೇಗೌಡನದೊಡಿ ್ಡಗ್ರಾಮದಲ್ಲಿ ಆಂಜನೇಯಸ್ವಾಮಿ ದೇಗುಲ ಶನಿವಾರ ಲೋಕಾರ್ಪಣೆಗೊಂಡಿತು.

ದೇಗುಲ ಉದ್ಘಾಟನೆ ಹಿನ್ನೆಲೆಯಲ್ಲಿ ದೇವರ ಮೂಲ ವಿಗ್ರಹವನ್ನು ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ದೇಗುಲ ಆವರಣ ಹೂವು ಮತ್ತು ದೀಪಗಳಿಂದ ಕಂಗೊಳಿಸುತ್ತಿತ್ತು. ಗ್ರಾಮದ ಪ್ರಮುಖ ರಸ್ತೆಗಳನ್ನು ದೀಪಗಳಿಂದ ಅಲಂಕರಿಸಲಾಗಿತ್ತು.

ದೇಗುಲದಲ್ಲಿ ವಿಮಾನಗೋಪುರ, ಮಹಾಕುಂಭಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನೆರವೇರಿದವು. ಸಾವಿರರು ಭಕ್ತರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಸುತ್ತಮುತ್ತಗಳ ಗ್ರಾಮಗಳ ಭಕ್ತರು ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ತೀರ್ಥ ಪ್ರಸಾದ ಸ್ವೀಕರಿಸಿದರು.

ಶಾಸಕ ಕೆ.ಎಂ.ಉದಯ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ನಟ, ನಿರ್ದೇಶಕ ಪ್ರೇಮ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ದೇವರ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net