

ಪಡುಬಿದ್ರಿ: ಕಾಪು ಶ್ರೀ ಹೊಸಮಾರಿಗುಡಿ ಬ್ರಹ್ಮಕಲಶೋತ್ಸವ ಪೂರ್ವಭಾವಿಯಾಗಿ ಕಾಪು ಪುರಸಭೆ ಸದಸ್ಯರು ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಬುಧವಾರ ಸಭೆ ನಡೆಸಿ ಚರ್ಚಿಸಿದರು.
ಫೆಬ್ರವರಿ 25ರಿಂದ ಮಾರ್ಚ್ 5ರವರೆಗೆ ನಡೆಯಲಿದ್ದು, ಲಕ್ಷಾಂತರ ಜನರು ಭಾಗವಹಿಸಿರುವುದರಿಂದ ಮೂಲಸೌಕರ್ಯ ವ್ಯವಸ್ಥೆ ಹಾಗೂ ಶುಚಿತ್ವ ಮತ್ತು ವಾಹನ ನಿಲುಗಡೆಗೆ ಜತೆಗೆ ವಾಹನಗಳ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡುವ ಬಗ್ಗೆ ಚರ್ಚಿಸಲಾಯಿತು.
ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಕಾಪು ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ಹಾಗೂ ಪುರಸಭೆ ಸದಸ್ಯರು, ಅಧಿಕಾರಿಗಳು, ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.