ವಾಯವ್ಯ ಸಾರಿಗೆ ಸಂಸ್ಥೆ ಉಪಾಧ್ಯಕ್ಷರಾಗಿ ಕೌತಾಳ

New Kautal
Published on

ಹುಬ್ಬಳ್ಳಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ಅವರು ಸಂಸ್ಥೆಯ ಇಲ್ಲಿನ ಕೇಂದ್ರ ಕಚೇರಿಯಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದರು.

ನಂತರ ಮಾತನಾಡಿದ ಪೀರಸಾಬ ಕೌತಾಳ ಅವರು, ಸಂಸ್ಥೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರದ ಸಹಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.

ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಇಲಾಖಾ ಮುಖ್ಯಸ್ಥರಾದ ವಿವೇಕಾನಂದ ವಿಶ್ವಜ್ಞ, ಪಿ.ವೈ.ನಾಯಕ, ಬಿ.ಬೋರಯ್ಯ, ವಿಜಯಶ್ರೀ ನರಗುಂದ, ಮಾಲತಿ ಎಸ್.ಎಸ್, ಜಗದಂಬಾ ಕೋಪರ್ಡೆ, ಬಸವರಾಜ ಅಮ್ಮನ್ನವರ, ಗಣೇಶ ರಾಠೋಡ, ಇಸ್ಮಾಯಿಲ್ ಕಂದಗಲ್, ಶ್ರೀನಾಥ ಜಿ. ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net